ಬೆಂಗಳೂರು : ಸಾಮಾನ್ಯವಾಗಿ ಮಹಿಳೆಯರು ಎಲ್ಲೇ ಸಭೆ ಸಮಾರಂಭಕ್ಕೆ ತೆರಳುವಾಗ ಚಿನ್ನ ಧರಿಸುವುದು ರೂಢಿ. ಆದರೆ ರಸ್ತೆಯಲ್ಲಿ ಹೋಗುವಾಗ ಮಾತ್ರ ತುಂಬಾ ಎಚ್ಚರದಿಂದ ಇರಬೇಕು. ಇದೀಗ ಬೆಂಗಳೂರಿನಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಮೇಲಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ಹೌದು ಪಲ್ಸರ್ ಬೈಕ್ ನಲ್ಲಿ ಬಂದಂತಹ ಇಬ್ಬರು ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಮತ್ತು ಹಾರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಓಬಳಾಪುರ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.
7 ಲಕ್ಷಕ್ಕೂ ಹೆಚ್ಚು ಮೌಲ್ಯದ 90 ಗ್ರಾಂ ತೂಕದ ಚಿನ್ನಾಭರಣ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಒಬಳಾಪುರ ಗ್ರಾಮದ ನಿವಾಸಿ ವನಿತ ಚಿನ್ನಾಭರಣ ಕಳೆದುಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.