ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದಿನಿಂದ ಅಕ್ಟೋಬರ್ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 21 ರ ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.