ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಮೆಜೆಸ್ಟಿಕ್, ಶಾಂತಿನಗರ, ಜಯನಗರ, ತ್ಯಾಗರಾಜ ನಗರ, ಶ್ರೀನಗರ, ಕೆ.ಆರ್. ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ಯಲಹಂಕ, ಬನ್ನೇರುಘಟ್ಟ, ಕೆ.ಆರ್. ನಗರ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತ್ತಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಕತ್ತಿಗುಪ್ಪ, ಪದ್ನನಾಭನಗರ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.