ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಇನ್ ಸ್ಟಾಗ್ರಾಂ ಬಳಸುತ್ತಿದ್ದಾರೆ. ಇನ್ ಸ್ಟಾಗ್ರಾಂ ರೀಲ್ಸ್ ಗಾಗಿ ಹಲವು ಜನರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದು, ಇದೀಗ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಹೌದು, ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಯುವಕನಿಂದಾಗಿ ವಿವಾಹಿತ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿರುವ ಆಂಧ್ರಪ್ರದೇಶ ರಾಜ್ಯದ ಪೂರ್ವ ಗೋದಾವರಿ ಜಿಲ್ಲೆಯ ಚಕ್ರದ್ವಾರ ಬಂಧಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿವಾಹಿತ ಮಹಿಳೆ ಇನ್ಸ್ಟಾಗ್ರಾಮ್ ನಲ್ಲಿ ಯುವಕನನ್ನು ಭೇಟಿಯಾಗಿದ್ದಾಳೆ. ಬಳಿಕ ಇಬ್ಬರೂ ವೀಡಿಯೋ ಕಾಲ್ ನಲ್ಲಿ ಮಾತನಾಡಿದ್ದಾನೆ. ಯುವಕ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಾ ಇಡೀ ಪ್ರಕರಣವನ್ನು ರೆಕಾರ್ಡ್ ಮಾಡಿಕೊಂಡಿದ್ದನಂತೆ. ವಿವಾಹಿತ ಮಹಿಳೆಗೆ ಯುವಕ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ ಎಂದು ವರದಿಯಾಗಿದೆ. ಯುವಕನ ಬ್ಲ್ಯಾಕ್ ಮೇಲ್ ಗೆ ಹೆದರಿ ಮಹಿಳೆ 4 ಲಕ್ಷ ನಗದು ಮತ್ತು ಚಿನ್ನವನ್ನು ನೀಡಿದ್ದಾಳೆ. ಆದರೆ ಆಕೆಯ ಬಳಿ ಚಿನ್ನಾಭರಣ ಪತ್ತೆಯಾಗದ ಕಾರಣ ಕುಟುಂಬಸ್ಥರು ಪ್ರಶ್ನಿಸಿದ್ದಾರೆ. ಇದರಿಂದ ಮನೆಯಲ್ಲಿ ಜಗಳ ಶುರುವಾಗಿದೆ. ಇದರಿಂದ ಮನನೊಂದ ಆಕೆ ಹುಟ್ಟೂರಿಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತರಿಗೆ ಪುಟ್ಟ ಮಗುವಿತ್ತು.
ಘಟನೆ ಸಂಬಂಧ ಪೊಲೀಸರಿಗೆ ಮಹಿಳೆಯ ತಮ್ಮ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಪ್ರಕರಣದ ಸತ್ಯಾಂಶ ಬಯಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.