ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಾದ್ಯಂತ ಬೆಳಗ್ಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ನಗರದ ಕೆಲವೆಡೆ ತುಂತುರು ಮಳೆಯಾದರೆ, ಇನ್ನು ಕೆಲವೆಡೆ ಭಾರಿ ಮಳೆಯಾಗಿದೆ. ಮೋಡ ಕವಿದ ವಾತಾವರಣವು ಅನೇಕ ಜನರನ್ನು ಮನೆಯೊಳಗೆ ಇರುವಂತೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರವಾಹದಿಂದ ಹಾನಿಗೊಳಗಾದ ಅಪಾರ್ಟ್‌ಮೆಂಟ್ ಸಂಕೀರ್ಣದ ನಿವಾಸಿಗಳಿಗೆ ಸಹಾಯ ಮಾಡಲು ಟ್ರ್ಯಾಕ್ಟರ್‌ಗಳನ್ನು ನಿಯೋಜಿಸಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳ ನಿವಾಸಿಗಳು ಮತ್ತು ಕೆರೆಕಟ್ಟೆಗಳ ಬಳಿ ನಿರ್ಮಿಸಿರುವ ಕಟ್ಟಡಗಳ ಬಗ್ಗೆ ಮತ್ತೊಮ್ಮೆ ಆತಂಕ ಮೂಡಿಸಿದೆ. ಅಕ್ಟೋಬರ್ 15ರಂದು ನಗರದಲ್ಲಿ 65 ಮಿ.ಮೀ ಮಳೆ ದಾಖಲಾಗಿದ್ದು, ಶೇ.228ರಷ್ಟು ಹೆಚ್ಚಳವಾಗಿದೆ. ಅಂದು 142 ಸ್ಥಳಗಳಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, 30 ಮರಗಳು ನೆಲಕ್ಕುರುಳಿವೆ.