ಗದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಹಲವು ಬಾರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಕುರಿತಂತೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.








