ಹಾಸನ: ರೋಗಿಯನ್ನು ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸಾಗಿಸುವ ವಿಚಾರಕ್ಕಾಗಿ ಎರಡು ಆಂಬುಲೆನ್ಸ್ ಚಾಲಕರ ನಡುವೆ ಮಾರಾಮಾರಿಯಾಗಿದೆ. ಇಬ್ಬರು ಚಾಲಕರು ಪರಸ್ಪರ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.
ಹಾಸನ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಎರಡು ಆ್ಯಂಬುಲೆನ್ಸ್ ಚಾಲಕರು ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಜಗಳ ತಾರಕಕ್ಕೇರಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡು, ಹೊಡೆದಾಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಿಂದ ರೋಗಿಯೊಬ್ಬರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವಿಚಾರಕ್ಕಾಗಿ ಇಬ್ಬರು ಆ್ಯಂಬುಲೆನ್ಸ್ ಚಾಲಕರ ನಡುವೆ ಗಲಾಟೆಯಾಗಿ, ಪರಸ್ಪರ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.
ಓರ್ವ ಚಾಲಕನಿಗೆ ಹಿಗ್ಗಾಮುಗ್ಗಾ ಮತ್ತೊಂದು ಚಾಲಕರ ಗುಂಪು ಥಳಿಸಿದೆ. ಹೊಡೆದಾಟವನ್ನು ಬಿಡಿಸಲು ಹಾಸನ ಜಿಲ್ಲಾ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹೈರಾಣಾದರು. ಹೊಡೆದಾಟದ ಬಳಿಕ ಚಾಲಕರು ವಾಪಾಸ್ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ
Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ