ಶಿವಮೊಗ್ಗ : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ದೈನಂದಿನ ವಿದ್ಯಾಮನಗಳಿಗೆ ಸಂಬಂಧಿಸಿದಂತೆ ಮೌಲ್ಯ ಶಿಕ್ಷಣ ನೀಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯಾದ್ಯಂತ ಇದನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು. ಈ ತರಗತಿಯಲ್ಲಿ ಸಂಚಾರ ನಿಯಮಗಳು, ಆರೋಗ್ಯ ಮಾಹಿತಿ, ಪರಿಸರ ಸಂರಕ್ಷಣೆ, ಕೃಷಿ ಸೇರಿ ಸಾಮಾನ್ಯ ಜ್ಞಾನ ಸೇರಿ ವಿವಿಧ ವಿಷಯಗಳ ಕುರಿತು ಪಾಠ ಹೇಳಿಕೊಡಲಾಗುವುದು ಎಂದು ತಿಳಿಸಿದ್ದಾರೆ.