ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಇಂದು ಹುಬ್ಬಳ್ಳಿಗೆ ತೆರಳಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕೂಡ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಕಗ್ಗಂಟಾಗಿ ಪರಿಣಮಿಸಿದ್ದು, ಇದುವರೆಗೂ ಬಿಜೆಪಿಯಾಗಲಿ, NDA ಮೈತ್ರಿ ಕೂಟದ ಜೆಡಿಎಸ್ ಆಗಲಿ ಹಾಗೂ ಕಾಂಗ್ರೆಸ್ ಕೂಡ ಅಭ್ಯರ್ಥಿಯನ್ನು ಘೋಷಿಸಿಲ್ಲ.
ಇನ್ನೊಂದು ಕಡೆ ಸಿಪಿ ಯೋಗೇಶ್ವರ್ ಅವರು ನಾನು ಸ್ಪರ್ಧಿಸಿದರೆ ಬಿಜೆಪಿಯಿಂದ ಮಾತ್ರ ಸ್ಪರ್ಧಿಸುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸುವುದು ನನ್ನ ಆಸೆಯಾಗಿದೆ. ಆದರೆ ಕುಮಾರಸ್ವಾಮಿಯವರು ಅವರ ಮಗನಿಗೆ ಟಿಕೆಟ್ ಕೊಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಹಾಗಾಗಿ ನಾನು ಸ್ವತಂತ್ರವಾಗಿ ಸ್ಪರ್ಧಿಸಿದರು ಸ್ಪರ್ಧಿಸುತ್ತೇನೆ ಎಂದು ಸಿ ಪಿ ಯೋಗೇಶ್ವರ್ ತಿಳಿಸಿದರು. ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಚಿಸಿರುವ ಸಿಪಿ ಯೋಗೇಶ್ವರ್, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.