ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಪೈಕಿ ಚನ್ನಪಟ್ಟಣ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿದೆ. ಇದುವರೆಗೂ ಕೂಡ ಮೈತ್ರಿ ಪಕ್ಷವಾಗಲಿ ಹಾಗೂ ಕಾಂಗ್ರೆಸ್ಸಾಗಲಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ಅಲ್ಲದೆ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಇಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿ ದೇವೇಗೌಡರ ನಿವಾಸದಲ್ಲಿ ದಿಢೀರ್ ಸಭೆ ನಡೆಸಲಾಯಿತು.
ಸಭೆಯ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಾನು ಸ್ಪರ್ಧಿಸುತ್ತೇನೆ ಅಂತ ಹೇಳಿಲ್ಲ. ಸಾಧಕ ಭಾದಕ ನೋಡಿಕೊಂಡು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ.ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಲು ಎಚ್ ಡಿ ಕುಮಾರಸ್ವಾಮಿಗೆ ಹೇಳಿದ್ದಾರೆ. ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರಿಗೆ ಹೇಳಿದ್ದಾರೆ. ಮೈತ್ರಿಗೆ ಭಂಗವಾಗಬಾರದು ಅಂತ ನಾವು ಸುಮ್ಮನಿದ್ದೇವೆ ಎಂದರು.
ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಲು ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಒಬ್ಬ ವ್ಯಕ್ತಿಯ ನಡವಳಿಕೆ ನೋಡಿ ನಾವು ಆತುರದ ನಿರ್ಧಾರ ಮಾಡಲ್ಲ. ದೇವೇಗೌಡರು ಕುಮಾರಣ್ಣ ಜೊತೆಗೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಚನ್ನಪಟ್ಟಣದಲ್ಲಿ ನಾನು ಅಭ್ಯರ್ಥಿ ಅಂತ ಎಂದು ವೈಯಕ್ತಿಕವಾಗಿ ಹೇಳಿಲ್ಲ. ಪಕ್ಷದಲ್ಲಿ ನನ್ನ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಎರಡು ಮೂರು ದಿನಗಳ ಹಿಂದೆ ಸಿಪಿ ಯೋಗೇಶ್ವರ ಜೊತೆಗೆ ನಮ್ಮ ಮುಖಂಡರು ಚರ್ಚೆ ಮಾಡಿದ್ದರು. ಸಿಪಿ ಯೋಗೇಶ್ವರ್ ಜೊತೆಗೆ ಪಕ್ಷದ ಹಿರಿಯ ಮುಖಂಡರು ಚರ್ಚೆ ಮಾಡಿದ್ದರು. ಜೆಡಿಎಸ್ ಚಿಹ್ನೆಯ ಅಡಿ ಸ್ಪರ್ಧಿಸುವಂತೆ ಯೋಗೇಶ್ವರ್ ಅವರಿಗೆ ಆಫರ್ ಕೊಟ್ಟಿದ್ದರು.
ಈ ಆಫರ್ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೇಳಿರಲಿಲ್ಲ ಇದನ್ನು ಜೆಡಿಎಸ್ ಪಕ್ಷದ ಮುಖಂಡರೇ ನನಗೆ ಹೇಳಿದ್ದರು ಸಿಪಿ ಯೋಗೇಶ್ವರ್ ವಿಚಾರದಲ್ಲಿ ನಾವು ದೊಡ್ಡ ಔದಾರ್ಯತೆ ತೋರಿದ್ದೇವೆ ನಮ್ಮ ನಾಯಕರು ಸಿಪಿ ಯೋಗೇಶ್ವರ್ ಅವರಿಗೆ ಆಹ್ವಾನ ಕೊಟ್ಟಿದ್ದಾರೆ. ಇನ್ನೇನು ಮಾಡಬೇಕು? ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನೆಸಿದ್ದಾರೆ