ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಇದೇ ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.#nandini @CMofKarnataka @siddaramaiah… pic.twitter.com/fYnUZ2Klv2
— DIPR Karnataka (@KarnatakaVarthe) October 21, 2024
ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲೇ 1 ವರ್ಷದಲ್ಲಿ ‘103 ಎಕರೆ ಅರಣ್ಯ’ ಒತ್ತುವರಿ ತೆರವು: ಸಚಿವ ಈಶ್ವರ್ ಖಂಡ್ರೆ
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?