ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ವೃದ್ಧೆಯೊಬ್ಬರು ಗಾಯಗೊಂಡಿದ್ದರು. ಇಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿಯ ಮೀನಾಕ್ಷಮ್ಮ(63) ಎಂಬುವರು ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಗಾಯಗೊಂಡಿದ್ದರು. ಅವರನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವೃದ್ಧೆ ಮೀನಾಕ್ಷಮ್ಮ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ರೈತರ ಮಕ್ಕಳಿಗೆ ಗುಡ್ ನ್ಯೂಸ್: ‘ಜೇನುಗಾರಿಕೆ ತರಬೇತಿ’ಗೆ ಅರ್ಜಿ ಆಹ್ವಾನ
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?