ಚಿತ್ರದುರ್ಗ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ (63) ಮೃತಪಟ್ಟ ವೃದ್ಧೆ ಎಂದು ತಿಳಿದುಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ಒಂದು ಅವಘಡ ನಡೆದಿದೆ. ಮನೆ ಗೋಡೆ ಕುಸಿದು ಮೀನಾಕ್ಷಮ್ಮ ಗಾಯಗೊಂಡಿದ್ದರು.
ಕೂಡಲೇ ಅವರನ್ನ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೀನಾಕ್ಷಮ್ಮ ಸಾವನಪ್ಪಿದ್ದಾರೆ ಎನ್ನಲಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.