ಬೆಂಗಳೂರು : ಬೆಂಗಳೂರು ನಗರದಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿತ್ತು. ಆದರೆ ನಾಳೆ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ಯಾವುದೇ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಗದೀಶ್ ಅವರು, ಬೆಂಗಳೂರು ನಗರ ಜಿಲ್ಲೆಯ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಇಲ್ಲ. ಬೆಂಗಳೂರಿನಲ್ಲಿ ನಾಳೆ ವ್ಯಾಪಕ ಮಳೆ ಯಾಗುವ ಬಗ್ಗೆ ಮುನ್ಸೂಚನೆ ಇಲ್ಲ. ಹಾಗಾಗಿ ನಾಳೆ ಶಾಲಾ ಕಾಲೇಜು ಹಾಗು ಅಂಗನವಾಡಿಗಳಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.