ನವದೆಹಲಿ : ಉತ್ತರ ಪ್ರದೇಶದ ಸಿಕಂದರಾಬಾದ್ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮಹಿಳೆಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬುಲಂದ್ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ರಾತ್ರಿ 8:30-9 ರ ನಡುವೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿ 18-19 ಜನರಿದ್ದರು, ಎಂಟು ಜನರನ್ನು ರಕ್ಷಿಸಲಾಗಿದ್ದು, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಂಡ, ಮುನ್ಸಿಪಲ್ ಕಾರ್ಪೊರೇಷನ್ ತಂಡ, ವೈದ್ಯಕೀಯ ತಂಡ, ಎನ್ಡಿಆರ್ಎಫ್ ತಂಡ ಸ್ಥಳದಲ್ಲಿದೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳುವಂತೆ ನಮಗೆ ಸೂಚಿಸಿದ್ದಾರೆ. ಸ್ಫೋಟಕ್ಕೆ ಕಾರಣಗಳನ್ನು ತನಿಖೆ ಮಾಡಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಹೇಳಿದರು.