ಬೆಂಗಳೂರು: ವ್ಯಾಪಕ ಮಳೆಯ ಮುನ್ಸೂಚನೆಯ ಕಾರಣಕ್ಕೆ ಸೋಮವಾರ ಬೆಂಗಳೂರು ನಗರದ ಶಾಲಾ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೇ ಇಂದು ಬೆಂಗಳೂರಿನ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಮಂಗಳವಾರ ಬೆಂಗಳೂರಿನ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ. ಇಂದು ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯಿಲ್ಲ ಎಂಬುದಾಗಿ ತಿಳಿಸಿದರು.
ಇಂದು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯಿಂದ ನೀಡಲಾಗಿಲ್ಲ. ಈ ಹಿನ್ನಲೆಯಲ್ಲಿ ಇಂದು ಬೆಂಗಳೂರು ನಗರದ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ನೀಡುತ್ತಿಲ್ಲ ಎಂಬುದಾಗಿ ಹೇಳಿದರು.