ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನನ್ ಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಕೂಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ವೇಳೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ ವರದಿ ನೀಡುವಂತೆ ಹೈಕೋರ್ಟ್ ಕೇಳಿದ್ದು, ಅರ್ಜಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.