ಬೆಂಗಳೂರು : ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದ ಅಣ್ಣ, ತಂಗಿ ಪೈಕಿ ಇದೀಗ ಅಣ್ಣನ ಶವ ಪತ್ತೆಯಾಗಿದೆ.
ಬೆಂಗಳೂರಿನ ಕೆಂಗೇರಿ ಬಳಿ ಅಣ್ಣ, ತಂಗಿ ನಾಪತ್ತೆಯಾಗಿದ್ದರು. ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವೇಳೆ ಅಣ್ಣ ಜಾನ್ ಸೀನಾ (13) ಶವ ಪತ್ತೆಯಾಗಿದ್ದು, ತಂಗಿ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.