ಹಾಸನ : ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡು ಹಾಸನದಲ್ಲಿ ವಾಸವಾಗಿದ್ದ ಮೂವರು ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡು ಹಾಸನದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ.
ಮೂವರು ಬಾಂಗ್ಲಾ ವಲಸಿಗರು ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಆಧಾರ್ ಕಾರ್ಡ್ ಹೊಂದಿದ್ದರು. ಘಟನೆ ಸಂಬಂಧ ಪೆನಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.