ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಎಂ.ಡಿ.ಎಂ.ಎ ಕಿಸ್ಟಲ್ ಡ್ರಗ್, 9 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.
ದಿನಾಂಕ:17/10/2024 ರಂದು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತ್ತಿರುತ್ತದೆ. ಮಾಹಿತಿಯಲ್ಲಿ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಮೂವರು ವಿದೇಶಿ ಡ್ರಗ್ಪೆಡ್ಲರ್ಗಳು ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟಲ್ಗಳನ್ನು ಮಾರಾಟ ಮಾಡುತ್ತಿರುವುದಾಗಿ ತಿಳಿದುಬಂದಿದೆ.
ಈ ಮಾಹಿತಿಯನ್ನಾದರಿಸಿ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು. ದಿನಾಂಕ:17/10/2024 ರಂದು ವಿದೇಶಿ ಡ್ರಗ್ ಪೆಡ್ಡರ್ಗಳಿರುವ ಮನೆಯ ಮೇಲೆ ದಾಳಿ ಮಾಡಿ. ಮೂವರು ವಿದೇಶಿ ಡ್ರಗ್ ಪೆಡ್ಲರ್ಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದ ವಿದೇಶಿ ಡ್ರಗ್ ಪೆಡ್ಲರ್ಗಳವರಿಂದ 82 ಗ್ರಾಂ ತೂಕದ ಎಂ.ಡಿ.ಎಂ.ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿಕೊಂಡಿದ್ದ ಮೂರು ಮೊಬೈಲ್ ಫೋನ್ ಹಾಗೂ ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ ₹9 ಲಕ್ಷ.
ವಶಕ್ಕೆ ಪಡೆದ ಮೂವರು ವಿದೇಶಿ ಡ್ರಗ್ಪೆಡ್ಲರ್ಗಳು ಮೆಡಿಕಲ್/ಟೂರಿಸ್ಟ್ ವೀಸಾದಡಿ ದೆಹಲಿಗೆ ಬಂದು, ನಂತರದಲ್ಲಿ ಬೆಂಗಳೂರಿಗೆ ಬಂದು ವಾಸವಾಗಿದ್ದುಕೊಂಡಿರುತ್ತಾರೆ. ಬೆಂಗಳೂರಿನಲ್ಲಿ ವಾಸವಾಗಿರುವ ಆಫ್ರಿಕಾ ಮೂಲದವರಿಂದ ಮಾದಕವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟಲ್ ಅನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು. ಪರಿಚಯವಿರುವ ಗಿರಾಕಿಗಳಿಗೆ ಮತ್ತು ಕಾಲೇಜು ವಿಧ್ಯಾರ್ಥಿಗಳಿಗೆ 1 ಗ್ರಾಂ ಕ್ರಿಸ್ಟಲ್ಗೆ 08 ಸಾವಿರದಿಂದ * 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಮೂವರು ಆರೋಪಿಗಳ ವಿರುದ್ಧ ಈಗಾಗಲೇ ಕಳೆದ ವರ್ಷದ ಜೂನ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು ನಗರದ ಕೊತ್ತನೂರು ಮತ್ತು ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಕ್ರಮವಾಗಿ ಎನ್.ಡಿ.ಪಿ.ಎಸ್. ರೀತ್ಯಾ ಪ್ರಕರಣದಲ್ಲಿ ದಸ್ತಗಿರಿಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಈ ಮೂವರು ಆರೋಪಿಗಳ ಪೈಕಿ ಕ್ರಮವಾಗಿ ಈ ವರ್ಷದ ಜನವರಿ ಮಾಹೆಯಲ್ಲಿ ಓರ್ವನು ಮತ್ತು ಜೂನ್ ಮಾಹೆಯಲ್ಲಿ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಗೊಂಡಿರುತ್ತಾರೆ. ಈ ಆರೋಪಿಗಳು ಹೊರಗೆ ಬಂದು ಪುನಃ ಡ್ರಗ್ಸ್ ಪೆಡ್ಲಿಂಗ್ ದಂಧೆಯಲ್ಲಿ ತೊಡಗಿಸಿಕೊಂಡಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಬಂಧಿತ ಆರೋಪಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.