ಬೆಂಗಳೂರು : ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಈ.ತುಕಾರಾಮ ಪತ್ನಿಗೆ ಟಿಕೆಟ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಇಲ್ಲಿ ಪ್ರಬಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಇಲ್ಲಿ ಪ್ರಬಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ…
— Siddaramaiah (@siddaramaiah) October 22, 2024