ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಈ ವೇಳೆ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊನೆಗೂ ಅವರು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಹಾಗಾಗಿ ನಟ ದರ್ಶನ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಕಳೆದ ಕೆಲವು ದಿನಗಳ ಹಿಂದೆ ಕೂಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ವೇಳೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಇದೆ ವೇಳೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ ವರದಿ ನೀಡುವಂತೆ ಹೈಕೋರ್ಟ್ ಕೇಳಿದ್ದು, ಅರ್ಜಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.