ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇವರಲ್ಲಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳೀಯರು ಹೇಳುತ್ತಿರುವ ಪ್ರಕಾರ ಈ ಒಂದು ನಿರ್ಮಾಣ ಹಂತದ ಕಟ್ಟಡದ ಕೆಳಗಡೆ ಅನೇಕ ಕಾರ್ಮಿಕರು ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಮೂವರು ಸಿಲುಕಿ ದುರ್ಮರಣಹೊಂದಿರುವುದಾಗಿ ತಿಳಿದು ಬಂದಿದೆ. ಇನ್ನೂ ಉಳಿದಂತೆ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಂತ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಸದ್ಯರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರಿನ ಜನತೆ ಗಮನಕ್ಕೆ: ಅ.23ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru
SHOCKING : ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಬಿದ್ದು ಯುವಕ ದುರಂತ ಸಾವು! Video Viral