ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಸಂಚಲನ ಸೃಷ್ಟಿಯಾಗಿದ್ದು ಬಿಜೆಪಿ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ.ಈ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಬಹುದು ಎಂದು ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಒಂದೇ ಕಾರಿನಲ್ಲಿ ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಹಿಂದೆ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಬಳಿಕ ಬೇರೆ ಪಕ್ಷಕ್ಕೆ ಹೋಗಿದ್ದಾರೆ, ಇದೀಗ ಅವರು ಘರ್ ವಾಪಸಿ ಆಗಿದ್ದಾರೆ.ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಯಾವುದೇ ರೀತಿಯಾದಂತಹ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು.








