ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ನಡೆ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರ ಮೂಲಕ ಅಂತ್ಯ ಹಾಡಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇಂದು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಚರ್ಚಿಸಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿರೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ನಂತರ ಡಿಕೆ ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಅಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಡಿಸಿಎಂ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರು ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಂಜೆ ಎಲ್ಐಸಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೆ ಹಾಗಾಗಿ ನಾಳೆ ಸಿಪಿ ಯೋಗೇಶ್ವರ್ ಅವರು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ನಾಳೆ ಬೆಳಗ್ಗೆ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಇಂದು ಎಐಸಿಸಿ ಗೆ ಟಿಕೆಟ್ ಬಗ್ಗೆ ಕಳುಹಿಸಿ ಕೊಡುತ್ತೇನೆ. ಎಐಸಿಸಿ ನಾಯಕರು ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.