ದಾವಣಗೆರೆ : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ರಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಬಹಳ ಸಹಕಾರಿಯಾಗಿದೆ. ಈ ಒಂದು ಹಣವನ್ನು ತರಲು ಬ್ಯಾಂಕಿಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೌದು ಕೊಳೆಯಾದ ಮಹಿಳೆಯನ್ನು ಸತ್ಯಮ್ಮ ಎಂದು ಗುರುತಿಸಲಾಗಿದ್ದು ಇನ್ನು ಹತ್ಯೆಗೈದ ಪತಿಯನ್ನ ಅಣ್ಣಪ್ಪ ಎಂದು ಹೇಳಲಾಗುತ್ತಿದೆ.ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ನಿನ್ನೆ ಜಗಳೂರು ತಾಲೂಕಿನ ಅಸಗೋಡ್ ಬ್ಯಾಂಕ್ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು. ಆದ್ರೆ, ಗೃಹ ಲಕ್ಷ್ಮಿ ಹಣ ಡ್ರಾ ಮಾಡಿಕೊಳ್ಳಲು ಒಡೆರಹಳ್ಳಿ ಗ್ರಾಮಕ್ಕೆ ಬಂದಿದ್ದಾಳೆ. ಈ ವೇಳೆ ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ.ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.