ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನು ಸೋಲು ಪಾಸ್ವಾನ್ ಎಂದು ಗುರುತಿಸಲಾಗಿದೆ.ಈ ಮೂಲಕ ಇದುವರೆಗೂ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲಿಕ ಭುವನ್ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದವು ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿಯಪ್ಪನನ್ನು ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ NDRF, SDRF ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ.