ತುಮಕೂರು : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಇದೀಗ ತುಮಕೂರಿನಲ್ಲಿ ನಿರಂತರವಾದ ಸುರಿದ ಮಳೆಗೆ ಮನೆ ಗೋಡೆ ಹಸಿಯಾಗಿದ್ದು, ಈ ವೇಳೆ ಸ್ನಾನಕ್ಕೆ ತೆರಳಿದ್ದ ಮಹಿಳೆಯ ಮೇಲೆ ಗೋಡೆ ಕುಸಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ಹೌದು ಸ್ನಾನ ಮಾಡಲು ಹೋಗಿದ್ದ ಸಹನಾ (27) ಎನ್ನುವ ಮಹಿಳೆಯ ಮೇಲೆ ಗೋಡೆ ಕುಸಿದು ಬಿದ್ದಿತ್ತು. ಮಣ್ಣಿನ ಆಡಿ ಸಿಲುಕಿದ್ದ ಸಹನಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಸಹನಾ ಮೃತ ಪಟ್ಟಿರುವುದಾಗಿ ವೈದ್ಯರು ಧೃಡಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.