ಬೆಂಗಳೂರು : ಬೆಂಗಳೂರಿನ ಬಾಬಾ ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಅಲ್ಲದೆ ಅವಶೇಷಗಳ ಅಡಿ ಇನ್ನೂ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ.
ಇದುವರೆಗೂ 8 ಶವಗಳನ್ನು ಹೊರಗಡೆ ತೆಗೆಯಲಾಗಿದೆ. ಅಲ್ಲದೆ 13 ಕಾರ್ಮಿಕರನ್ನು ರಕ್ಷಿಸಲಾಗಿದೆ, ಸ್ಥಳದಲ್ಲಿ ಎನ್ ಡಿ ಆರ್ ಎಫ್ ಹಾಗೂ ಎಸ್ಡಿಆರ್ಎಫ್, ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದು, ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿರಾಜ ರೆಡ್ಡಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.