ಚಿತ್ರದುರ್ಗ: ಜಿಲ್ಲೆಯಲ್ಲಿ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಪಿವಿಎಸ್ ಖಾಸಗಿ ಆಸ್ಪತ್ರೆಯ 2ನೇ ಮಹಡಿಯಿಂದ ನರ್ಸ್ ಇಂದ್ರಮ್ಮ(36) ಕೆಳಗೆ ಬಿದ್ದಾಗ ತಲೆಗೆ ಬಲವಾದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬಸವೇಶ್ವರ ಮೆಡಿಕಲ್ ಆಸ್ಪತ್ರೆ ಮತ್ತು ಕಾಲೇಜಿಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ನರ್ಸ್ ಇಂದ್ರಮ್ಮ ಅವರು 2ನೇ ಮಹಡಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಆಘಾತಗೊಂಡು ಕೆಳಗೆ ಬಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಕಾಂಗ್ರೆಸ್ ಪಕ್ಷ ಸೇರಿ ಸಿ.ಪಿ.ಯೋಗೇಶ್ವರ್ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ: ಆರ್.ಅಶೋಕ್