ಬೆಂಗಳೂರು : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನೆನ್ನೆ ರಾತ್ರಿ ಸುರಿದ ಮಳೆಗೆ ಹಲವೆಡೆ ಮರಗಳು ಧರೆಗೆ ಉರುಳಿವೆ. ಮಹದೇವಪುರ, ಬೊಮ್ಮನಹಳ್ಳಿ ಬಿಟಿಎಂ ಲೇಔಟ್, ಬಾಪೂಜಿ ನಗರದಲ್ಲಿ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ.