ಬೆಂಗಳೂರು : ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡುವವರಿದ್ದರು. ಆದರೆ ಇದೀಗ ಅವರ ಭೇಟಿ ಮುಂದೂಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಹೌದು ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಒಟ್ಟು ಎಂಟು ಜನರು ಸಾವನಪ್ಪಿದ್ದಾರೆ. ಈ ಒಂದು ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.
ಹವಾಮಾನ ವೈಪರಿತ ಹಿನ್ನೆಲೆಯಲ್ಲಿ ವಿಮಾನ ಪ್ರಯಾಣ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಪ್ರಾಣಿಸಲಿದ್ದಾರೆ. ರಸ್ತೆ ಮಾರ್ಗವಾಗಿ ಬರುತ್ತಿರುವುದರಿಂದ ಸಿಎಂ ಬೆಂಗಳೂರು ತಲುಪುವುದು ವಿಳಂಬವಾಗಿದೆ. ಹೀಗಾಗಿ ಬಾಬುಸಾಬ್ ಪಾಳ್ಯ ಭೇಟಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.