ಬೆಂಗಳೂರು : ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಇದೀಗ ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಯ ಪರಿಣಾಮ ಕಾಡುಗೋಡಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ನೀರಿನ ಗುಂಡಿಗೆ ಬಿದ್ದು ಸುಹಾಸ್ ಗೌಡ (7) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕನ್ನಮಂಗಲದ ನಿರ್ಮಾಣ ಹಂತದ ಹಾಲಿನ ಡೈರಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.ಲಿಫ್ಟ್ ನಿರ್ಮಾಣಕ್ಕೆ ಅಗೆದಿದ್ದ ನೀರಿನ ಗುಂಡಿಗೆ ಬಿದ್ದು ದುರಂತ ಸಂಭವಿಸಿದೆ.ಆಟವಾಡುವಾಗುವ ನೀರಿನ ಗುಂಡಿಗೆ ಬಿದ್ದು ಸುಹಾಸ್ ಗೌಡ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.