ಹಾವೇರಿ: ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಯಾವಿಯಲ್ಲಿ ಈ ಬಾರಿ ಹೊಸ ಯುವಕರ ತಂಡ ನಮ್ಮ ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬರುತ್ತಿದೆ ಎಂದರು.
ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ ಆಗಿದ್ದು, ಅದು ಸಂಸದ ಕೋಟ ಶ್ರೀವಿವಾಸ ಪೂಜಾರಿ ಅವರಿಂದ ಖಾಲಿಯಾಗಿದ್ದ ಸ್ಥಾನ. ಅಲ್ಲಿ ಜನ ಪ್ರತಿನಿಧಿಗಳು ನಮ್ಮ ಪರವಾಗಿದ್ದಾರೆ. ಅಲ್ಲದೇ, ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನರು ಮತ ಹಾಕಿದ್ದಾರೆ. ಅಲ್ಲಿ ಪಜ್ಞಾವಂತ ಮತದಾರರಿದ್ದಾರೆ. ಗ್ರಾಮ ಪಂಚಾಯತಿ, ಸ್ಥಳೀಯ ನಗರಸಭೆಯ ಸದಸ್ಯರು ಮತದಾನ ಮಾಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಎರಡು ಸಾವಿರ ಕೋಟಿ ರೂ. ಕೊಟ್ಟಿಲ್ಲ. ಇವರು ಕೇಂದ್ರ ಸರ್ಕಾರದ ವಿರದ್ದ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡದಿರುವುದರಿಂದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಈ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಕುಟುಂಬದವರು ಬಿಟ್ಟರೆ ಬೇರೆಯವರು ಅಭ್ಯರ್ಥಿ ಆಗುವುದಿಲ್ಲ ಎಂಬ ಕಾಂಗ್ರೆಸ್‌ನವರ ಹೇಳಿಕೆ ಕುರಿತು ಕೇಳಿದ ಪತಿಗೆ ಹರಿಕ್ರಿಯಿಸಿದ ಅವರು, ಚನ್ನ ಪಟ್ಟಣದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಇಲ್ಲ ಎನ್ನುವುದು ಈಗಾಗಲೇ ಸಾಬೀತಾಗಿದೆ. ಅಲ್ಲಿ ಕುಮಾರಸ್ವಾಮಿಯವರ ವರ್ಚಸ್ಸು ಚೆನ್ನಾಗಿದೆ. ಈ ಎಲ್ಲ ಪ್ರಕ್ರಿಯೆ ನಡುವೆ ಜನರು ಕಾಂಗ್ರೆಸ್ ನವರನ್ನು ತಿರಸ್ಕಾರ ಮಾಡುತ್ತಾರೆ ಎಂದು ಹೇಳಿದರು.
BIGG NEWS: ‘BJP 8 ಶಾಸಕ’ರು ‘ಕಾಂಗ್ರೆಸ್ ಪಕ್ಷ’ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ
ಚನ್ನಪಟ್ಟಣ ಉಪ ಚುನಾವಣೆ: ನಾಳೆ ಮಧ್ಯಾಹ್ನ 12ಕ್ಕೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ