Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈಲ್ವೆ ಪ್ರಯಾಣಿಕರ ಗಮನಕ್ಕೆ: ದೀಪಾವಳಿ, ಛತ್ ಪ್ರಯುಕ್ತ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ | South Western Railway
KARNATAKA

ರೈಲ್ವೆ ಪ್ರಯಾಣಿಕರ ಗಮನಕ್ಕೆ: ದೀಪಾವಳಿ, ಛತ್ ಪ್ರಯುಕ್ತ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ | South Western Railway

By kannadanewsnow0924/10/2024 5:07 PM

ಬೆಂಗಳೂರು: ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು ಹುಬ್ಬಳ್ಳಿ-ಮುಜಾಫರ್‌ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ:

ಹುಬ್ಬಳ್ಳಿ-ಕೊಲ್ಲಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಮಧ್ಯಾಹ್ನ 3:15ಕ್ಕೆ ಹೊರಟು ಮರುದಿನ ಸಂಜೆ 5:10 ಕ್ಕೆ ಕೊಲ್ಲಂ ನಿಲ್ದಾಣವನ್ನು ತಲುಪಲಿದೆ.

ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07314 ಅಕ್ಟೋಬರ್ 27 ರಂದು ಕೊಲ್ಲಂನಿಂದ ರಾತ್ರಿ 8:30 ಕ್ಕೆ ಹೊರಟು, ಮರುದಿನ ರಾತ್ರಿ 8:45 ಕ್ಕೆ ಹುಬ್ಬಳ್ಳಿ ತಲುಪಲಿದೆ.

ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಶಿವಕಾಶಿ, ರಾಜಪಾಳ್ಯಮ್, ಶ್ರೀವಿಲ್ಲಿಪುತ್ತೂರು, ಕಡಯನಲ್ಲೂರು, ತೆಂಕಾಶಿ, ಸೆಂಗೋಟ್ಟೈ , ತೆನಮಲೈ , ಪುನಲೂರು, ಆವನೀಶ್ವರಂ, ಕೊಟ್ಟಾರಕರ ಮತ್ತು ಕುಂದರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಬೆಂಗಳೂರು-ಸಂತ್ರಗಾಚಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ 06211 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಸಂತ್ರಗಾಚಿ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 26 ರಂದು ಬೆಳಿಗ್ಗೆ 10:15 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 7:45 ಗಂಟೆಗೆ ಸಂತ್ರಗಾಚಿ ತಲುಪಲಿದೆ.

ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06212 ಅಕ್ಟೋಬರ್ 27 ರಂದು ಸಂತ್ರಗಾಚಿಯಿಂದ ರಾತ್ರಿ 11:30ಕ್ಕೆ ಹೊರಟು, ಮರುದಿನ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 12:30 ಗಂಟೆಗೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ಕಟ್ಪಾಡಿ, ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್, ಬಾಲೇಶ್ವರ ಮತ್ತು ಖರಗ್ಪುರ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿರುತ್ತದೆ

ಯಶವಂತಪುರ-ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ 06215 ಯಶವಂತಪುರ-ಕೊಟ್ಟಾಯಂ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 29 ರಂದು ಸಂಜೆ 6:30ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 8:10 ಕ್ಕೆ ಕೊಟ್ಟಾಯಂ ನಿಲ್ದಾಣ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06216 ಅಕ್ಟೋಬರ್ 30 ರಂದು ಬೆಳಿಗ್ಗೆ 11:10 ಕ್ಕೆ ಕೊಟ್ಟಾಯಂನಿಂದ ಹೊರಟು, ಮರುದಿನ ಅಂದರೆ ಅಕ್ಟೋಬರ್ 31 ರಂದು 1:15 (AM) ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಕೃಷ್ಣರಾಜಪುರಂ, ವೈಟ್‌ಫೀಲ್ಡ್, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ ಮತ್ತು ಎರ್ನಾಕುಲಂ ಟೌನ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ. 06217 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 31 ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿ ತಲುಪಲಿದೆ.

ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 06218 ನವೆಂಬರ್ 1 ರಂದು ಕಲಬುರಗಿಯಿಂದ ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಹುಬ್ಬಳ್ಳಿ-ಮುಜಾಫರ್‌ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ 07315 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮುಜಾಫರ್‌ಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ನವೆಂಬರ್ 4 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಸಂಜೆ 5:20ಕ್ಕೆ ಹೊರಟು, ನವೆಂಬರ್ 6 ರಂದು ಸಂಜೆ 4 ಗಂಟೆಗೆ ಮುಜಾಫರ್‌ಪುರ ನಿಲ್ದಾಣವನ್ನು ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07316 ನವೆಂಬರ್ 9 ರಂದು ಮುಜಾಫರ್‌ಪುರ ನಿಲ್ದಾಣದಿಂದ ಮಧ್ಯಾಹ್ನ 1:15 ಕ್ಕೆ ಹೊರಟು, ನವೆಂಬರ್ 11 ರಂದು ಬೆಳಿಗ್ಗೆ 10:30 ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ, ದೌಂಡ್ ಕಾರ್ಡ್ ಲೈನ್, ಅಹ್ಮದ್‌ನಗರ, ಕೋಪರ್‌ಗಾಂವ್, ಮನ್ಮಾಡ್, ಭೂಸಾವಲ್, ಖಾಂಡ್ವಾ, ಇಟಾರ್ಸಿ, ನರಸಿಂಗ್‌ಪುರ, ಜಬಲ್‌ಪುರ, ಕಟ್ನಿ, ಸತ್ನಾ, ಮಾಣಿಕ್‌ಪುರ, ಪ್ರಯಾಗ್‌ರಾಜ್ ಛೋಇಕಿ, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಬಕ್ಸಾರ್, ಅರಾ, ದಾನಾಪುರ, ಪಾಟ್ಲಿಪುತ್ರ, ಸೋನ್‌ಪುರ್ ಮತ್ತು ಹಾಜಿಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.

ಡಾನಾ ಚಂಡಮಾರುತ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

ರಾಜ್ಯದ ‘ST ಸಮುದಾಯ’ದವರಿಗೆ ಗುಡ್ ನ್ಯೂಸ್: ‘ವಿವಿಧ ಯೋಜನೆ’ಗಳಿಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM1 Min Read

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM2 Mins Read

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM1 Min Read
Recent News

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM
State News
KARNATAKA

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

By kannadanewsnow0510/04/2026 1:45 PM KARNATAKA 1 Min Read

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಒಬ್ಬಳು ಸಾವನಪ್ಪಿದ್ದಾಳೆ. ಇದೀಗ ಇವೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ…

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.