ಬೆಂಗಳೂರು: 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ.
ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ.
ಅಂದಹಾಗೇ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದಂತ ನ್ಯಾಯಾಲಯವು ಇಂದು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.
ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ
BREAKING: ಕೊಪ್ಪಳದ ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಕೇಸ್: 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ