ಬೆಂಗಳೂರು: ನಗರಲ್ಲಿನ ಅಕ್ರಮ ಕಟ್ಟಡ ಮಾಲೀಕರು, ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ಅದೇ ಅಕ್ರಮವಾಗಿ ಕಟ್ಟಿದ ಕಟ್ಟಡ, ನಕ್ಷೆ ಉಲ್ಲಂಘಿಸಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಲು ಆದೇಶಿಸಿದೆ.
ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಮಂಜೂರಾಗುವ ಕಟ್ಟಡ ನಕ್ಷೆಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ನಕ್ಷೆ ಮಂಜೂರಾದ 30 ದಿನಗಳೊಳಗೆ ಕಟ್ಟಡ ಮಾಲೀಕರು ಅಥವಾ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ʼಬಿಲ್ಡಿಂಗ್ ಪ್ಲಿಂಥ್ ಲೈನ್ʼ ಅನ್ನು ನಗರ ಯೋಜನೆ ಅಧಿಕಾರಿಗಳು ಗುರುತು ಮಾಡಿಕೊಡಬೇಕು. ಅದನ್ನು ಕೇಂದ್ರ ಹಾಗೂ ವಲಯ ಕಚೇರಿಯ ಜಂಟಿ ನಿರ್ದೇಶಕರು ದೃಢೀಕರಿಸಬೇಕು ಎಂದಿದ್ದಾರೆ.
ವಾರ್ಡ್‌ನಲ್ಲಿ ಕಿರಿಯ, ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್‌ಗಳು ಮಂಜೂರಾದ ನಕ್ಷೆಯ ವಿವರ ಪಡೆದುಕೊಂಡು ಅದರ ಅನುಸಾರ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿರುವುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಿಕೊಳ್ಳಬೇಕು.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ
ಇನ್ನು ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಅನೇಕ ಕಟ್ಟಡಗಳು ಪಾಲಿಕೆ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ಒಡೆದು ಹಾಕಲು ಆದೇಶ ನೀಡಲಾಗಿದೆ. ನಂಜಪ್ಪ ಗಾರ್ಡನ್ ಪ್ರದೇಶದಲ್ಲಿ 10 x 25 ಅಡಿ ನಿವೇಶನದಲ್ಲಿ ನೆಲಮಹಡಿ ಜತೆಗೆ 5 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನು ತೆರವುಗೊಳಿಸಲು ಸೂಚಿಸಿದ್ದೇನೆ. ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದೇನೆ.
ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳಲು ನಮಗೆ ಸಂಪೂರ್ಣ ಅಧಿಕಾರವಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲು ಅಧಿಕಾರವಿದೆ. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್ ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ಹಿಂದೆಯೂ ಅಧಿಕಾರವನ್ನು ಮೇಲ್ಕಂಡ ಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ 2020-21ರ ಸಮಯದಲ್ಲಿ ಅದನ್ನು ಹಿಂಪಡೆಯಲಾಗಿತ್ತು. ಈಗ ಮತ್ತೆ ನೀಡಲಾಗುತ್ತಿದೆ. ಕಂದಾಯ ಬಡಾವಣೆಯಾಗಿರಲಿ, ಬೇರೆ ಬಡಾವಣೆಯಾಗಿರಲಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಒತ್ತುವರಿ ನಿಲ್ಲಿಸಲು ಸುಗ್ರೀವಾಜ್ಞೆ ತರಲು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ. ಈ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು.
BREAKING: ರಾಜ್ಯದ ‘ಅರಣ್ಯ ಭೂಮಿ ಸಾಗುವಳಿ ರೈತ’ರಿಗೆ ‘ಸಚಿವ ಈಶ್ವರ್ ಖಂಡ್ರೆ’ ಗುಡ್ ನ್ಯೂಸ್