ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಆನಂದ್ (36) ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ಆನಂದ್ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬೈಕ್ ಸವಾರ ಆನಂದ್ ಮತ್ತೊಂದು ವಾಹನವನ್ನು ಓವರ್ ಟೆಕ್ ಮಾಡುವಾಗ ಎದುರಿಗೆ ಬಂದ ಬಿಎಂಟಿಸಿ ಬಸ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.