ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ.
ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ವಿಸ್ತರಿಸಲಾಗಿತ್ತು. ಸದರಿ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.