ಉಡುಪಿ : ಉಡುಪಿ ಜಿಲ್ಲೆಯಲ್ಲಿ ಘೋರ ಘಟನೆ ನಡೆದಿದ್ದು, ಪ್ರಿಯಕರನ ಜೊತೆಗೆ ಸೇರಿ ಪತ್ನಿಯೇ ಪತಿಯನ್ನು ಸ್ಲೋಪಾಯಿಸನ್ ನೀಡಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಸೇರಿ ಪತಿ ಬಾಲಕೃಷ್ಣನನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಪತಿ ಬಾಲಕೃಷ್ಣಗೆ ಸ್ಲೋ ಪಾಯಿಸನ್ ನೀಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಕಳೆದ 25 ದಿನಗಳಿಂದ ಪತಿ ಬಾಲಕೃಷ್ಣರನ್ನು ಕೆಎಂಸಿ, ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಂದು ಮನೆಯಲ್ಲಿ ತಡರಾತ್ರಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.