ದಕ್ಷಿಣಕನ್ನಡ : ರಸ್ತೆ ಮಧ್ಯದಲ್ಲೇ ಎರಡು ಮುಸ್ಲಿಂ ಯುವಕರ ಮಧ್ಯ ಗಲಾಟೆ ನಡೆಸಿದ್ದು, ಗಲಾಟೆಯಲ್ಲಿ ಲಾಂಗು ಮಚ್ಚು ಕೂಡ ಝಳಪಿಸಿದ್ದು, ಓರ್ವನಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಮಂಗಳೂರು ಹೊರವಲಯದ, ಫರಂಗಿಪೇಟೆ ಬಳಿಯ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಳೇ ದ್ವೇಷದ ಹಿನ್ನೆಲೆ ತಲವಾರಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು. ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ಪೋನ್ ಕಾಲ್ ಬಂದ ಹಿನ್ನಲೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋಗಿ ಅಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿಇಮ್ರಾನ್ ತಂಡದಿಂದ ತಲವಾರು ದಾಳಿಯಾಗಿದ್ದು. ಹಲ್ಲೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಬಂದಿದೆ.