ಬೆಂಗಳೂರು : ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿ ಒಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಈ ಸುದ್ದಿ ತಿಳಿದು ತಕ್ಷಣ ಪೊಲೀಸರು ಕೇವಲ 20 ನಿಮಿಷದಲ್ಲಿ ಆತನಿರುವ ಸ್ಥಳಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆದಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಹೌದು ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲ್ (27) ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು. ಕೌಟುಂಬಿಕ ಕಲಹದಿಂದ ಮನನೊಂದು ನಿನ್ನೆ ತಡರಾತ್ರಿ ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎಎಸ್ಐ ನಾಗೇಶ್ ಮತ್ತು ಎಸಿಪಿ ಸಂಜೀವ್ ಕುಮಾರ್ ಅವರು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದಾರೆ.
ಅದ್ದಿಗಾನಹಳ್ಳಿಯ ನಿವಾಸಿ ಗೋಪಾಲ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದರು. ಸಾಯುವ ಮುನ್ನ ತನ್ನ ತಂಗಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ತಕ್ಷಣವೇ ಅವರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಗೋಪಾಲ್ ಪತ್ತೆಗೆ ಪೊಲೀಸರು ಆತನ ಮೊಬೈಲ್ ಲೊಕೇಶನ್ ಪತ್ತೆ ಮಾಡಿ, ಸ್ಥಳಕ್ಕೆ ಹೋಗಿದ್ದಾರೆ. ಓಡಿ ಹೋಗುತ್ತಿದ್ದ ಆತನನ್ನು ಪೊಲೀಸರು ಆತ್ಮಹತ್ಯೆ ಯತ್ನವನ್ನು ತಡೆದಿದ್ದಾರೆ.