ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯ ನಂತ್ರ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸೇಫ್ ಆಗಿದ್ದಾರೆ.
ಬೆಂಗಳೂರಿನ ಬೊಮ್ಮನಹಳ್ಳಿ-ಹೊಸೂರು ಮುಖ್ಯ ರಸ್ತೆಯಲ್ಲಿ ಇಂದು ಈ ಅಗ್ನಿ ಅವಘಡ ಸಂಭವಿಸಿದೆ. ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೇ, ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.
ಪ್ರಯಾಣಿಕರು ಬಸ್ ಇಳಿದು ಓಡಿ ಹೋಗುತ್ತಿದ್ದಂತೆ ನಡು ರಸ್ತೆಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಬೊಮ್ಮನಹಳ್ಳಿ – ಹೊಸೂರು ಹೆದ್ದಾರಿಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದ್ದರಿಂದ ಟ್ರಾಫಿಕ್ ಜಾಮ್ ಆಗಿದೆ. ಕಿಲೋಮೀಟರ್ ಗಟ್ಟಲೇ ವಾಹನಗಳು ಟಾರ್ಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ.
BIG NEWS: ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ‘ಜನನ-ಮರಣ ನೋಂದಣಿ’ಗೆ ಭರ್ಜರಿ ರೆಸ್ಪಾನ್ಸ್: 71,388 ಅರ್ಜಿ ಸ್ವೀಕಾರ