ಬೆಂಗಳುರು : ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ಅ.26 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಕಡ್ಡಾಯ ಕನ್ನಡ ಭಾಷೆ, ಅ.27 ರಂದು ಬೆಳಿಗ್ಗೆ 10-30ರಿಂದ 12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2-30ರಿಂದ ಸಂಜೆ 4.30 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.
ಕೇಂದ್ರದೊಳಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಂತೆ ನಿಗಾವಹಿಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ, ಕೇಂದ್ರದೊಳಗೆ ಪ್ರವೇಶ ಮಾಡುವಾಗ ಸಂಪೂರ್ಣ ತಪಾಸಣೆ ಮಾಡಿ ಭಾವಚಿತ್ರಗಳನ್ನು ಮೂಲ ದಾಖಲೆಗಳೊಂದಿಗೆ ಪರೀಕ್ಷೆ ಮಾಡಲು ಸೂಚಿಸಿ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ನೀಡುವಾಗ ಮತ್ತು ಉತ್ತರ ಪತ್ರಿಕೆ ವಾಪಾಸ್ ಪಡೆಯುವುದನ್ನು ಹಾಗೂ ಖಜಾನೆ ಕಳುಹಿಸುತ್ತಿರುವ ಕುರಿತು ವಿಡಿಯೋ ಮಾಡಲಾಗುತ್ತದೆ.
ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಪುರುಷ ಅಭ್ಯರ್ಥಿಗಳು ಪೂರ್ಣ ತೊಳಿನ ಶರ್ಟ್ ಧರಿಸಬಾರದು, ಮಹಿಳೆಯರು ಮಂಗಲ್ಯಸರವನ್ನು ಬಿಟ್ಟು ಬೇರೆ ಯಾವುದೇ ರೀತಿಯ ಆಭರಣಗಳನ್ನು ಧರಿಸಬಾರದು. ಕಿವಿಯಲ್ಲಿ ಹೇರ್ ಪೆÇೀನ್‍ಗಳ ಹಾಕಿರುವುದನ್ನು ಪರೀಕ್ಷಿಸುವಂತೆ ಜಿಲ್ಲಾ ಆರೋಗ್ಯಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಭ್ಯರ್ಥಿಗಳ ಆಧಾರ್ ಕಾರ್ಡ್ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮೊಬೈಲ್, ಕ್ಯಾಲಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಅವರು ಗುರುತಿನ ಚೀಟಿ ಹೊಂದಿರಬೇಕು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದ ವರೆಗೆ ಜಾರಿಯಲ್ಲಿರುತ್ತದೆ