ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುವಾಗ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಾಯಿಗೆ ಕಲ್ಲಿನಿಂದ ಹೊಡೆದಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಬೆಂಗಳೂರು ನಗರದ ರಾಮಮೂರ್ತಿ ನಗರದ NRI ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಯುವತಿ ಹೋಗುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದೆ. ಈ ವೇಳೆ ಯುವತಿ ಬೈಕ್ ನಿಂದ ಇಳಿದು ನಾಯಿಗೆ ಕಲ್ಲಿನಿಂದ ಹೊಡೆದಿದ್ದಾಳೆ. ಇದರಿಂದ ಕೋಪಗೊಂಡ ನಾಯಿಯ ಮಾಲೀಕ ಯುವಕ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿ ಯುವತಿ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಇನ್ನು ಮತ್ತೊಂದಡೆ ಯುವಕನೂ ಸಹ ರಾಮಮೂರ್ತಿ ನಗರ ಠಾಣೆಗೆ ದೂರು ನೀಡಿದ್ದು, ಯುವತಿ ಕಲ್ಲಿನಿಂದ ನಾಯಿಗೆ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವತಿ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯುವಕ ದೂರಿನಲ್ಲಿ ಉಲ್ಲೇಖಿಸಿದ್ದಾರೆ.