Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ‘HMT’ ವಶದಲ್ಲಿದ್ದ 5 ಎಕರೆ `ಅರಣ್ಯ ಭೂಮಿ’ ವಶಕ್ಕೆ ಪಡೆದ ಅರಣ್ಯ ಇಲಾಖೆ.!
KARNATAKA

BIG NEWS : ಬೆಂಗಳೂರಲ್ಲಿ ‘HMT’ ವಶದಲ್ಲಿದ್ದ 5 ಎಕರೆ `ಅರಣ್ಯ ಭೂಮಿ’ ವಶಕ್ಕೆ ಪಡೆದ ಅರಣ್ಯ ಇಲಾಖೆ.!

By kannadanewsnow57

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು 5 ಎಕರೆ ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ.

ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.

ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

BIG NEWS : Forest department has seized 5 acres of ``forest land'' which was in the possession of 'HMT' in Bangalore. BIG NEWS : ಬೆಂಗಳೂರಲ್ಲಿ ‘HMT' ವಶದಲ್ಲಿದ್ದ 5 ಎಕರೆ `ಅರಣ್ಯ ಭೂಮಿ’ ವಶಕ್ಕೆ ಪಡೆದ ಅರಣ್ಯ ಇಲಾಖೆ.!
Share. Facebook Twitter LinkedIn WhatsApp Email

Related Posts

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

2 Mins Read

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

2 Mins Read

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

3 Mins Read
Recent News

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

State News
KARNATAKA

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ವಿದೇಶಿ ಹಣವನ್ನು ಅಕ್ರಮವಾಗಿ ಭಾರತಕ್ಕೆ ತಂದು, ಅದನ್ನು ನಕ್ಸಲ್ ಪೀಡಿತ ಪ್ರದೇಶಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿನ ಸಂಘಟನಾತ್ಮಕ…

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.