ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಕಳಪೆ ಗುಣಮಟ್ಟದ ರೇಷನ್ ವಿತರಿಸುವುದನ್ನು ಬಿಡಿ. ರಾಜ್ಯದ ಯಾವುದೇ ಇಲಾಖೆಯಲ್ಲೂ ಸರಿಯಾಗಿ ಕೆಲಸ ಆಗುತ್ತಿಲ್ಲ. ಕೊನೆಯ ಪಕ್ಷ ತಿನ್ನುವ ಅನ್ನವಾದರೂ ಸರಿಯಾಗಿ ಪೂರೈಸಿ ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಇಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗದಗ ತಾಲೂಕಿನಲ್ಲಿ ಪಡಿತರ ವಿತರಣೆಯಲ್ಲಿ ಕಳಪೆ ಗುಣಮಟ್ಟದ ಜೋಳ ವಿತರಣೆ ಆಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದ್ದು, ಇವುಗಳಲ್ಲಿ ಕಸ, ಕಡ್ಡಿ ಮತ್ತು ಹೊಟ್ಟುಗಳು ಕಾಣಿಸಿಕೊಂಡಿವೆ. ಇದರ ಬಳಕೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಭಯ ಸಹ ಹೆಚ್ಚುತ್ತಿದೆ ಎಂದಿದ್ದಾರೆ.
ಅಧಿಕಾರಕ್ಕೆ ಬಂದರೆ 10 ಕೆಜಿ ಪಡಿತರವನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬಿಟ್ಟರೆ ಮತ್ತೇನು ಬರುತಿಲ್ಲ, ಮತ್ತೆ ಬಡಜನರಿಗೆ ಗುಣಮಟ್ಟದ ಆಹಾರ ಸಿಗುತ್ತಿಲ್ಲ. ಬಡವರ ಪಾಲಿಗೆ ಈ ರೀತಿ ಕಳಪೆ ಆಹಾರ ನೀಡುವುದು ಎಷ್ಟು ನ್ಯಾಯ? ಜನರ ಜೀವಕ್ಕಿಂತ ಏನೂ ದೊಡ್ಡದು ಅಲ್ಲ ಎಂದು ಕೇಳಿದ್ದಾರೆ.
ಸಿದ್ಧರಾಮಯ್ಯ ಸರ್ಕಾರವು ತಕ್ಷಣವೇ ಸ್ಪಂದಿಸಬೇಕು ಯಾವ ಇಲಾಖೆಯಲ್ಲೂ ಸರಿಯಾಗಿ ಕೆಲಸಗಳಾಗುತ್ತಿಲ್ಲ ಕೊನೇಪಕ್ಷ ತಿನ್ನುವ ಅನ್ನವನ್ನಾದರೂ ಸರಿಯಾಗಿ ಪೂರೈಸಿ ಎಂಬುದಾಗಿ ಆಹಾರ ಸಚಿವ ಕೆಹೆಚ್ ಮುನಿಯಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ.? ಇಲ್ಲಿದೆ ಮಾಹಿತಿ
ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut