ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಯ ಡಿಸಿಗಳು ಹಾಗೂ ಎಸ್ ಪಿ ಗಳಿಗೆ ಸೂಚನೆ ನೀಡಿ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ಬಳಸಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿ ಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಡಿಸಿಗಳು ಮತ್ತು ಎಸ್ ಪಿ ಗಳಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತು ಖಡಕ್ ಸೂಚನೆ ನೀಡಿದ್ದಾರೆ.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ. ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ. 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ.ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಮಳೆ ಹಾನಿಯ ಬಗ್ಗೆ ಡಿಸಿಸಿ ಗಳ ಹಾಗೂ ಎಸ್ ಪಿ ಗಳ ಸಭೆ ಮಾಡಿದ್ದೇನೆ. ಬೆಂಗಳೂರು ಸೇರಿದಂತೆ ಹಲಗಡೆ ಹಿಂಗಾರು ಮಳೆಯಿಂದ ಹಾನಿಯಾಗಿದೆ. ಅಕ್ಟೋಬರ್ 1 ರಿಂದ 25 ರವರೆಗೆ 181 ಮಿಲಿ ಮೀಟರ್ ಮಳೆಯಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಇದುವರೆಗೂ 25 ಜನರು ಮಳೆಯಿಂದ ಮೃತಪಟ್ಟಿದ್ದಾರೆ.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗ್ರಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: 48 ಗಂಟೆಯಲ್ಲೇ ಪರಿಹಾರ ವಿತರಣೆಗೆ ಸಿಎಂ ಸಿದ್ಧರಾಮಯ್ಯ ಆದೇಶ
ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut