ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಮುರಳಿರಾವ್ ಆರ್.ಜೆ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.9141142754 ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.
ಸಂಡೂರು ವಿಧಾನಸಭೆ ಉಪಚುನಾವಣೆ-2024ಕ್ಕೆ ಒಟ್ಟು 13 ನಾಮಪತ್ರ ಸಲ್ಲಿಕೆ
ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್.ಅಂಜಿನಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಟಿ.ಎಂ.ಮಾರುತಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ಮೂರು ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಕೆಯಾಗಿವೆ.
ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು ಏಳು ಅಭ್ಯರ್ಥಿಗಳು ಒಟ್ಟು 13 ನಾಮಪತ್ರ ಸಲ್ಲಿಸಿದ್ದಾರೆ.
ಅದರಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್.ವೆಂಕಣ್ಣ, ಟಿ.ರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ.ಎಂ.ಮಾರುತಿ ಇವರುಗಳು ಒಂದೊಂದು ನಾಮಪತ್ರ ಸಲ್ಲಿಸಿದ್ದರೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ.ಅನ್ನಪೂರ್ಣ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಅದೇರೀತಿಯಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್.ಅಂಜಿನಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.30 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.
BIG NEWS: ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು: ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ