ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದ ನಂತರ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾಗಿವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟ ಪಡಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಲೋಕಸಭೆ ಚುನಾವಣೆಗೆ ಮೊದಲು ನಿಶಾ ಯೋಗೇಶ್ವರ್ ಅವರು ಕುಮಾರಕೃಪಾದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಒಮ್ಮೆ ಭೇಟಿ ಮಾಡಿದ್ದರು ಎಂದಿದ್ದಾರೆ.
ಆಗ ಡಿಸಿಎಂ ಅವರು ತಂದೆ-ಮಗಳ ವಿಚಾರದಲ್ಲಿ ತಾನು ತಲೆ ಹಾಕುವುದಿಲ್ಲ. ಅಪ್ಪ-ಮಗಳನ್ನು ದೂರ ಮಾಡಿದ ಅಪಕೀರ್ತಿಗೆ ನಾನು ಒಳಗಾಗಲು ಬಯಸುವುದಿಲ್ಲ. ನಿಮ್ಮ ಕುಟುಂಬ ವಿಚಾರದಲ್ಲಿ ನಾನು ತಲೆ ಹಾಕಿಲ್ಲ, ಈಗಲೂ ಹಾಕುವುದಿಲ್ಲ. ಮುಂದೆಯೂ ಹಾಕುವುದಿಲ್ಲ. ನಿಮ್ಮ ತಂದೆಯ ಜತೆ ಮಾತನಾಡಿ ನೀವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಬುದ್ದಿವಾದ ಹೇಳಿ ಕಳುಹಿಸಿದ್ದರು ಎಂದು ತಿಳಿಸಿದ್ದಾರೆ.
ಹೀಗಾಗಿ ನಿಶಾ ಯೋಗೇಶ್ವರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋ ತುಣುಕುಗಳಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ಸಂಪೂರ್ಣ ದೂರವಾಗಿವೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟ ಪಡೆಸಿದ್ದಾರೆ.
BIG NEWS: ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು: ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ